7 ರಾಜ್ಯಗಳ ಉಪ ಚುನಾವಣೆಯಲ್ಲಿ 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಿಗೆ ಗೆಲುವು !

 


   7 ರಾಜ್ಯಗಳ ಉಪ ಚುನಾವಣೆಯಲ್ಲಿ 13 ಕ್ಷೇತ್ರಗಳ  

  ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಿಗೆ ಗೆಲುವು!   



ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ವಿವಿಧ ಪಕ್ಷಗಳ 10 ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

ಹಿಮಾಚಲ ಪ್ರದೇಶದ ಮೂರು ಕ್ಷೇತ್ರಗಳ ಪೈಕಿ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದು, ಒಂದು ಕ್ಷೇತ್ರ ಬಿಜೆಪಿ ಪಾಲಾಗಿದೆ. ಮಧ್ಯ ಪ್ರದೇಶದ ಒಂದು ಕ್ಷೇತಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಅಭ್ಯರ್ಥಿ ಜಯಗಳಿಸಿದ್ದಾರೆ.

ಪಂಜಾಬ್‌ ಮತ್ತು ತಮಿಳುನಾಡಿನ ತಲಾ ಒಂದು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಮ್ ಅದ್ಮಿ ಪಕ್ಷ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಉತ್ತರಾಖಂಡದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಪೈಕಿ ಬದ್ರಿನಾಥ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ವಿಶೇಷವಾಗಿದೆ.

ಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಎಲ್ಲಾ ಕ್ಷೇತ್ರಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ ಗೆದ್ದುಕೊಂಡಿದೆ.

ಬಿಹಾರದ ಒಂದು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ.


ವರದಿ 
ಖಡಕ್ ಕನ್ನಡ Digital ನ್ಯೂಸ್ ಡೆಸ್ಕ್


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!