ಕಮತಗಿ ಪಟ್ಟಣದ ಮಲಪ್ರಭಾ ನದಿಯ ಪ್ರವಾಹ ಭಾದಿತ ಪ್ರದೇಶಗಳ ಭೇಟಿ ಪರಿಶೀಲನೆ

ಕಮತಗಿ - ಬಾಗಲಕೋಟೆ ಜಿಲ್ಲೆಯ ವಿವಿಧ ಜಲಾಶಯಗಳ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಾಗಲಕೋಟೆ ಹಾಗೂ ಹುನಗುಂದ ತಾಲೂಕಿನ ಪ್ರವಾಹ ಬಾಧಿತ ಸ್ಥಳಗಳಿಗೆ ಜಿಲ್ಲಾಧಿಕಾರಿ ಶ್ರೀಮತಿ ಜಾನಕಿ ಕೆ.ಎಂ ಅವರು ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು.

ಹಿಪ್ಪರಗಿ ಮತ್ತು ಆಲಮಟ್ಟಿ ಜಲಾಶಯದ ಒಳ ಹರಿವಿನ ಮಟ್ಟ ಹೆಚ್ಚಾಗುತ್ತಿರುವುದರಿಂದ.
ಪ್ರವಾಹ ಬೀತಿ ಉಂಟಾಗಲಿದೆ. 

ಪ್ರವಾಹ ಬೀತಿ ಹಿನ್ನಲೆಯಲ್ಲಿ ಬಾದಿತ ಗ್ರಾಮಗಳಲ್ಲಿ ಜಿಲ್ಲಾಡಳಿತದಿಂದ ಕೈಗೊಂಡ ಮುಂಜಾಗ್ರತಾ ಕ್ರಮ ಹಾಗೂ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ದತೆಯನ್ನು ಪರಿಶೀಲಿಸಿದರು. ಪ್ರವಾಹ ಉಂಟಾದಲ್ಲಿ ಅಧಿಕಾರಿಗಳು ಮುಂಜಾಗ್ರತಾವಾಗಿ ಗ್ರಾಮಸ್ಥರ ಸ್ಥಳಾಂತರಕ್ಕೆ ಎಲ್ಲ ರೀತಿಯ ಸಕಲ ಸಿದ್ದತೆ ಕೈಗೊಳ್ಳಲು ಸೂಚಿಸಿದರು. 

ತಾವು ಕೈಗೊಂಡ ಸಿದ್ದತೆ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡುವ ಕೆಲಸವಾಗಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. 

ಆಲಮಟ್ಟಿ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪ್ರಮಾಣ 2.50 ಲಕ್ಷ ಕ್ಯೂಸೆಕ್ಸ್ ಆದಲ್ಲಿ ಪ್ರವಾಹ ಉಂಟಾಗುತ್ತದೆ 

ಇತ್ತ ಖಾನಾಪುರ ಭಾಗದಲ್ಲಿ ನಿರಂತರವಾಗಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ದಿನದಿಂದ ದಿನಕ್ಕೆ ನೀರು ಹೆಚ್ಚುತ್ತಿದೆ  ಯಾವುದೇ ಕ್ಷಣದಲ್ಲಾದರೂ ಮಲಪ್ರಭಾ ನದಿಗೆ ಜಲಾಶಯದಿಂದ ನೀರು  ಬಿಡಬಹುದು ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಬಹುದಾದ ಕಾರಣದಿಂದ 
ಹುನಗುಂದ ತಾಲೂಕಿನ ಪ್ರವಾಹ ಬಾಧಿತ ಗ್ರಾಮಗಳಾದ ಕಡಗೂರು, ತುರಡಿಹಾಳ, ಬಿಸಲದಿನ್ನಿ, ವಳಕಲದಿನ್ನಿ, ಕೆಂಗಲ್ ಕಡಪಟ್ಟಿ ಕೂಡಲಸಂಗಮ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಂತರ ವಡಗಗೋಡದಿನ್ನಿ, ಹೂವನೂರು, ನಂದನೂರು, ಗಂಜಿಹಾಳ, ಚಿಕ್ಕಮಳಗಾವಿ ಚಿಕ್ಕಮಾಗಿ, ಹಿರೇಮಾಗಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.


ಕಮತಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಟ್ಟಣದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು 
ಭೇಟಿ ಸಮಯದಲ್ಲಿ ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರರಾದ ನಿಂಗಪ್ಪ ಬಿರಾದಾರ, ಕಂದಾಯ ನಿರೀಕ್ಷಕ ಡಿ.ಎಸ್.ಯತ್ನಟ್ಟಿ, ಕಮತಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎಚ್.ಎಫ್.ಹುಲ್ಲಿಕೇರಿ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು 
ವರದಿ ಶಂಕರ್ ವನಕಿ ಕಮತಗಿ ಬಾಗಲಕೋಟೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!