ಉಕ್ಕಿ ಹರಿಯುತ್ತಿವೆ ಉತ್ತರ ಕರ್ನಾಟಕದ ನದಿಗಳು – ತುಂಬುತ್ತಿವೆ ಜಲಾಶಯಗಳು; ಡ್ಯಾಂಗಳ ನೀರಿನ ಮಟ್ಟ ಹೀಗಿದೆ






ಮಹಾರಾಷ್ಟ್ರ- ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗಿರುವ ಪರಿಣಾಮ, ಘಟಪ್ರಭ, ಕೃಷ್ಣಾ, ದೂಧಗಂಗಾ, ವೇದಗಂಗಾ ಮಲಪ್ರಭಾ ನದಿಗಳು ಮೈದುಂಬಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯ 8ಕ್ಕೂ ಹೆಚ್ಚು ಸೇತುವೆಗಳು ನದಿ ನೀರಿನಲ್ಲಿ ಮುಳುಗಿವೆ.


ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯಕ್ಕೆ 2.25 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಎಲ್ಲ 26 ಗೇಟ್‌ಗಳನ್ನು ತೆರೆಯಲಾಗಿದ್ದು, 2.50 ಲಕ್ಷ ಕ್ಯುಸೆಕ್‌ ನೀರನ್ನು ನಾರಾಯಣಪುರ ಜಲಾಶಯಕ್ಕೆ ಬಿಡಲಾಗುತ್ತಿದೆ ಇದರ ಪರಿಣಾಮ, ಕೃಷ್ಣಾ ನದಿ ಪಾತ್ರದ ಗ್ರಾಮಗಳಿಗೆ ನೀರು ನುಗ್ಗವ ಆತಂಕ ಎದುರಾಗಿದೆ.

ತುಂಗಭದ್ರಾ ನದಿ 

ವಿಜಯನಗರ ಜಿಲ್ಲೆಯಲ್ಲಿರುವ ತುಂಗಭದ್ರಾ ಜಲಾಶಯದ 10 ಕ್ರಸ್ಟ್‌ಗೇಟ್‌ಗಳಿಂದ ನದಿಗೆ ನೀರು ಬಿಡಲಾಗುತ್ತಿದೆ ಜಲಾಶಯ ಬಹುತೇಕ ಭರ್ತಿಯಾಗಿದ್ದು, 1 ಅಡಿಯಷ್ಟೇ ಬಾಕಿ ಉಳಿದಿದೆ.

ಇದೆ ಒಂದು ತಿಂಗಳ ಹಿಂದೆ ನೀರಿಲ್ಲದೆ ನದಿಗಳು ಖಾಲಿ ಖಾಲಿ ಆಗಿದ್ದವು ಆದರೆ 20 ರಿಂದ 25 ದಿನಗಳಲ್ಲಿ ಸುರಿದ ಭಾರಿ ಮಳೆಗೆ ತನ್ನೆಲ್ಲ ಒಡಲು ತುಂಬಿಕೊಂಡು ಭೋರ್ಗರೆಯುತ್ತಿವೆ 

ಮಹಾರಾಷ್ಟ್ರ ಕರ್ನಾಟಕ ಮತ್ತು ಪಶ್ಚಿಮ ಘಟ್ಟಗಳಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಇನ್ನಷ್ಟು ಹಳ್ಳಿಗಳು ಮುಳುಗಡೆ ಭೀತಿಯನ್ನು ಎದುರಿಸಬೇಕಾಗುತ್ತದೆ ಇದಕ್ಕಾಗಿ ಗ್ರಾಮ ಪಂಚಾಯಿತ ಮತ್ತು ಪಟ್ಟಣ ಪಂಚಾಯಿತ ವ್ಯಾಪ್ತಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ಕೈಗೊಂಡಿದ್ದಾರೆ 

ಉತ್ತರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ನೋಡೋಣ




ಶಂಕರ್ ವನಕಿ ಕಮತಗಿ ಬಾಗಲಕೋಟೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!