ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಕಡಿಮೆ ಮಾಡಿ: ರಾಜ್ಯಕ್ಕೆ ಮಹಾರಾಷ್ಟ್ರ ಪತ್ರ

 


ಕೃಷ್ಣ ನದಿಯಂಚಿನ ಮಹಾರಾಷ್ಟ್ರದ ಸಾಂಗ್ಲಿ ಹಾಗೂ ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಇದಕ್ಕೆ ಆಲಮಟ್ಟಿ ಜಲಾಶಯದ ಎತ್ತರ ಕಾರಣ ಎಂದು ಆರೋಪಿಸಿ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ಆಲಮಟ್ಟಿ ಜಲಾಶಯದ ಸದ್ಯದ ನೀರು ಸಂಗ್ರಹ ಮಟ್ಟವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿದೆ.


ಮಹಾರಾಷ್ಟ್ರದ ಶಾಸಕ ಸತೇಜ್ ಪಾಟೀಲ ನೇತೃತ್ವದಲ್ಲಿ ಮಹಾರಾಷ್ಟ್ರದ ಮುಖಂಡರು  ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್, ಕಾನೂನು ಸಚಿವ ಎಚ್ ಕೆ ಪಾಟೀಲ ಅವರನ್ನು ಭೇಟಿ ಮಾಡಿ, ಮಹಾಪೂರ ಸಮಯದಲ್ಲಿ ಆಲಮಟ್ಟಿ ಜಲಾಶಯದ ಮಟ್ಟವನ್ನು ಆಗಸ್ಟ್ 15 ರವರೆಗೆ 517 ಮೀಟರ್‌ವರೆಗೆ ಇಟ್ಟುಕೊಳ್ಳಬೇಕು. 3.5 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಬೇಕು ಎಂದು ಮನವಿ ಮಾಡಿದರು.


ಕೇಂದ್ರ ಸಚಿವರಿಗೂ ಮನವಿ


ಕೇಂದ್ರದ ಜಲಶಕ್ತಿ ಸಚಿವ ಸಿ ಆರ್ ಪಾಟೀಲ ಅವರನ್ನು ಭೇಟಿ ಮಾಡಿದ ಕೊಲ್ಹಾಪುರದ ಮಾಜಿ ಸಂಸದ ಧನಂಜಯ ಮಹಾಧಿಕ್, ಆಲಮಟ್ಟಿ ಜಲಾಶಯದಿಂದ ತಕ್ಷಣವೇ ಹೆಚ್ಚಿನ ನೀರು ನದಿಗೆ ಹರಿಸಲು ಕ್ರಮಕೈಗೊಳ್ಳಬೇಕು ಹಾಗೂ ಪ್ರವಾಹ ನಿಯಂತ್ರಣಕ್ಕೆ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.


ವರದಿ ಶಂಕರ್ ವನಕಿ ಕಮತಗಿ ಬಾಗಲಕೋಟೆ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!