ವ್ಯಕ್ತಿತ್ವ ಮತ್ತು ಕೌಶಲ್ಯವನ್ನು ರೂಪಿಸಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಎ‌ ಎಸ್ ಕಲ್ಯಾಣಶೆಟ್ಟಿ ಕರೆ


ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಮುಖಾಂತರ ವ್ಯಕ್ತಿತ್ವ ಮತ್ತು ಕೌಶಲ್ಯವನ್ನು ರೂಪಿಸಿಕೊಳ್ಳಬೇಕು ಇದರಿಂದ ರಾಷ್ಟ್ರೀಯ ಸೇವಾ ಯೋಜನೆ  ನಿಮಗೆ ಮಾರ್ಗದರ್ಶನವಾಗಲಿದೆ ಎಂದು ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಎ ಎಸ್ ಕಲ್ಯಾಣಶೆಟ್ಟಿ ಅವರು ಹುನಗುಂದ ತಾಲೂಕಿನ ರಾಮಥಾಳ ಗ್ರಾಮದಲ್ಲಿ ನಡೆದ 

ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಗ್ರಾಮೀಣ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ 2023 24ರ ವಾರ್ಷಿಕ ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು
ಕಾರ್ಯಕ್ರಮವನ್ನು  ಕಮತಗಿ ಪಟ್ಟಣದ ಶ್ರೀ ಪಾರ್ವತಿ ಪರಮೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶಂಕರಲಿಂಗಪ್ಪ ಮಂಕಣಿ ಉದ್ಘಾಟಿಸಿದರು 
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾಲಿಂಗೇಶ ನಾಡಗೌಡ ಅಧ್ಯಕ್ಷರು ಗ್ರಾಮ ಪಂಚಾಯತ ಕೆಲೂರ   
ಮುದ್ದಪ್ಪ ಕೋಳಮಲಿ ಅಧ್ಯಕ್ಷರು ಗ್ರಾಮ ಪಂಚಾಯತ ಹೂವಿನಹಳ್ಳಿ 
ಮುತ್ತಣ್ಣ ಮುಳ್ಳೂರ ಅಧ್ಯಕ್ಷರು ರಾಮಥಾಳ ಪಿ ಕೆ ಪಿ ಎಸ್    ಹಾಗೂ ಎಂ ಪಿ ಕುದುರಿ ಮುಖ್ಯೋಪಾಧ್ಯಾಯರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಥಾಳ ಇವರು ಆಗಮಿಸಿದ್ದರು 
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪಿ ಎಮ್  ಗುರುವಿನಮಠ ಡಿ ಆರ್ ಕುಬಸದ ಎನ್ ಪಿ ಹೊಲಮನಿಗೌಡ್ರು  ಎಂ ಎಸ್ ಶೆಟ್ಟರ್  ಜೆ ಎಸ್ ಬಾಗವಾಡಗಿ  ಎ ಎಸ್ ಪುರಾಣಿಕಮಠ  ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು
ವರದಿ ಶಂಕರ್ ವನಕಿ ಕಮತಗಿ ಬಾಗಲಕೋಟೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!