ಮಲಪ್ರಭಾ ಡ್ಯಾಂ ಭರ್ತಿಗೆ ಕೇವಲ 3 ಅಡಿ ಬಾಕಿ

 



ಸವದತ್ತಿ - ಖಾನಾಪುರ ತಾಲೂಕಿನಾದ್ಯಂತ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಕಳೆದ 1 ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ

ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2075.85 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಯಾಗಲು ಕೇವಲ 3.15 ಅಡಿ ಮಾತ್ರ ಬಾಕಿ ಇದ್ದು ಜಲಾಶಯಕ್ಕೆ ಈಗ 24 ಸಾವಿರ 400 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವುದರಿಂದ ಇಂದು ರಾತ್ರಿ ಡ್ಯಾಂ ಸಂಪೂರ್ಣ ಭರ್ತಿಯಾಗಲಿದೆ 

ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿರುವದರಿಂದ ಜಲಾಶಯದ ನೀರಿನ ಮಟ್ಟ ನಿರ್ವಹಣೆ ಮಾಡಲು ಅನುಕೂಲವಾಗುವಂತೆ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕ್ರಮೇಣ 15 ಸಾವಿರ ಕ್ಯೂಸೆಕ್ಸ್ ನೀರನ್ನುಹೊರ ಬಿಡುಗಡೆ ಮಾಡಲಾಗುತ್ತಿದೆ 

ಈ ಹಿನ್ನೆಲೆಯಲ್ಲಿ ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

 

ಬ್ಯೂರೋ ರಿಪೋರ್ಟ್ ಖಡಕ್ ಕನ್ನಡ Digital ನ್ಯೂಸ್ ಸವದತ್ತಿ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!