ಬಾಗಲಕೋಟೆ ಜಿಲ್ಲೆಯಾದ್ಯಂತ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

 



ಬಾಗಲಕೋಟೆ ಜಿಲ್ಲೆಯಾದ್ಯಂತ ಸಂಭ್ರಮದಿಂದ 78ನೇ ವರ್ಷದ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸಲಾಯಿತು

ಭಾರತದ ತ್ರಿವರ್ಣ ಧ್ವಜವನ್ನು ಎಲ್ಲೆಡೆ ಅನಾವರಣಗೊಳಿಸುವ ಮೂಲಕ ಬಹಳ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡಲಾಯಿತು 

ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಧ್ವಜಾರೋಹಣವನ್ನು ನೆರವೇರಿಸಿದರು 

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಶಾಸಕ  ಎಚ್ ವೈ ಮೇಟಿ ಸಂಸದ ಪಿ ಸಿ ಗದ್ದಿಗೌಡರ್ ನಾರಾಯಣ್ ಬಾಂಡಗೆ ಇದ್ದರು 


ಜಿಲ್ಲೆಯ ಕಮತಗಿ ಪಟ್ಟಣದಲ್ಲಿ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿ ಎಫ್ ಎನ್ ಹುಲ್ಲಿಕೇರಿ ಧ್ವಜಾರೋಹಣ ನೆರವೇರಿಸಿದರು ಕಮತಗಿ ಪಟ್ಟಣ ಪಂಚಾಯತ್ ಸದಸ್ಯರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು 

ಶ್ರೀ ಅನ್ನಪೂರ್ಣೇಶ್ವರಿ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ವೀರಭದ್ರಪ್ಪ ಆರಿ ಧ್ವಜಾರೋಹಣ ನೆರವೇರಿಸಿದರು ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು 



ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮ.ನಿ. ಪ್ರ ಹುಚ್ಚೇಶ್ವರ ಮಹಾಸ್ವಾಮಿಗಳು ಧ್ವಜಾರೋಹಣ ನೆರವೇರಿಸಿದರು ಸಂಸ್ಥೆಯ ಎಲ್ಲ ಆಡಳಿತ ಮಂಡಳಿಯ ನಿರ್ದೇಶಕರು ಪ್ರಾಚಾರ್ಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಹಾಜರಿದ್ದರು 



ಶ್ರೀ ಬನಶಂಕರಿ ಪೂರ್ವ ಹಾಗೂ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದೇವಾಂಗ ಸಮಾಜ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಪಾಂಡುರಂಗ ಹೋಟಿ ಧ್ವಜಾರೋಹಣ ನೆರವೇರಿಸಿದರು ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾಶ್ರೀ ವಣಕಿ ಸೇರಿದಂತೆ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಆಡಳಿತ ಮಂಡಳಿಯವರು ಧ್ವಜಾರೋಹಣದಲ್ಲಿ ಹಾಜರಿದ್ದರು 



ಕಮತಗಿ‌ ಪಟ್ಟಣದ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಬಹು ವಿಜೃಂಭಣೆಯಿಂದ ಧ್ವಜಾರೋಹಣ ನೆರವೇರಿಸಿದರು 


ಹುನಗುಂದ ತಾಲೂಕಿನ ಮೂಗನೂರು ಶ್ರೀ ಮರಡಿ ಮಲ್ಲೇಶ್ವರ ಪ್ರೌಢಶಾಲೆಯಲ್ಲಿ ಡಿ ವೈ ಎಸ್ ಪಿ ಯಲ್ಲನಗೌಡ ಬೈಲಕೊರ ಧ್ವಜಾರೋಹಣ ನೆರವೇರಿಸಿದರು ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಧ್ವಜಾರೋಹಣದಲ್ಲಿ ಪಾಲ್ಗೊಂಡಿದ್ದರು 



ಗುಳೇದಗುಡ್ಡ ಪುರಸಭೆಯಲ್ಲಿ ಮುಖ್ಯಾಧಿಕಾರಿ ಧ್ವಜಾರೋಹಣ ನೆರವೇರಿಸಿದರು ಪುರಸಭೆಯ ಎಲ್ಲಾ ಸದಸ್ಯರು ಸಿಬ್ಬಂದಿ ವರ್ಗ ಧ್ವಜಾರೋಹಣದಲ್ಲಿ ಹಾಜರಿದ್ದರು 


ನಮ್ಮ ಪ್ರತಿನಿಧಿಗಳು 

ಬಾಗಲಕೋಟೆಯಿಂದ ರಾಜೀವ್ ಸುಂಕದ  

ಕಮತಗಿಯಿಂದ ಶಂಕರ್ ವನಕಿ

ಗುಳೇದಗುಡ್ಡದಿಂದ ಸಂತೋಷ ಕಲಾಲಬಂಡಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!