ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ !

ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದರೊಂದಿಗೆ ಕಳೆದ ಎರಡು ತಿಂಗಳಿನಿಂದ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ನೆಮ್ಮದಿ ಸಿಕ್ಕಿದೆ.

 ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ.

 ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ.

ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಕಾರ್ಡ್‌ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. 

ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್‌ ಕಾರ್ಡ್‌ ಕಡ್ಡಾಯವಾಗಿದ್ದು, ಬಿಪಿಎಲ್‌ ಕಾರ್ಡ್‌ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ ಎನ್ನಲಾಗಿದೆ 

ವರದಿ - ಖಡಕ್ ಕನ್ನಡ Digital ನ್ಯೂಸ್ ಡೆಸ್ಕ್




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!