ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

 




ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ನಾಳೆಯಿಂದ ರಾಜ್ಯದ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಹಗುರ ಮಳೆ ಬಿದ್ದಿದೆ.


ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಮೇಲೆ ಯಾವುದೇ ನೇರ ಪರಿಣಾಮ ಉಂಟಾಗುವುದಿಲ್ಲ. ಇದರ ಪ್ರಭಾವದಿಂದ ಮೋಡ ಹೆಚ್ಚಾಗಲಿದ್ದು, ಆಗಸ್ಟ್‌ ತಿಂಗಳ ಅಂತ್ಯದವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೇಲೈ ಗಾಳಿ ಬೀಸಲಿದೆ. ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಕೇರಳ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಅರಬ್ಬೀ ಸಮುದ್ರದಲ್ಲಿ ಸಮುದ್ರದ ಮೇಲುಬ್ಬರ(ಟ್ರಫ್‌) ಉಂಟಾಗಿದೆ. ಅಲ್ಲದೆ, ಗುಜರಾತ್‌ ಕರಾವಳಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಎರಡೂ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ವಿರಳ.


ವಾತಾವರಣದಲ್ಲಿ ಉಂಟಾಗಿರುವ ಈ ರೀತಿಯ ಬದಲಾವಣೆಯಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಆದರೆ, ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.


ಬ್ಯೂರೋ ರಿಪೋರ್ಟ್ ಖಡಕ್ ಕನ್ನಡ ಡಿಜಿಟಲ್ ನ್ಯೂಸ್



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!