ಬೃಹತ್ ಮಾನವ ಸರಪಳಿ ನಿರ್ಮಿಸಿ ದಾಖಲೆ ನಿರ್ಮಿಸಿದ ಬಾಗಲಕೋಟೆ



ಜಿಲ್ಲಾಡಳಿತ ಭವನದ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು

ರಾಜ ಮಹಾರಾಜರ ಕಾಲದಲ್ಲಿ ರಾಜ ಮನೆತನದವರೇ ರಾಜ ನಾಗಬೇಕಿತ್ತು. ಆದರೆ ಈ ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಓರ್ವ ಸಾಮಾನ್ಯ ವ್ಯಕ್ತಿಯು ಸಹ ಈ ದೇಶದ ಪ್ರಧಾನ ಮಂತ್ರಿ, ರಾಜ್ಯದ ಮುಖ್ಯಮಂತ್ರಿಯಾಗಬಹುದು. ಅಂತಹ ಅದ್ಬುತವಾದ ಶಕ್ತಿ ನಮ್ಮ ಪ್ರಜಾಪ್ರಭುತ್ವಕ್ಕಿದೆ. ಭಾರತದ ಸಂವಿಧಾನ ವಿಶ್ವ ಶ್ರೇಷ್ಠ ಸಂವಿಧಾನವೆಂದು ಹೆಮ್ಮೆಯಿಂದ ಹೇಳುವಂತಹದ್ದಾಗಿದೆ. ರಾಜ್ಯದ ಬೀದರಿಂದ ಹಿಡಿದು ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿದೆ. ಇದರ ಉದ್ದೇಶ ಸಂವಿಧಾನವನ್ನು ಇನ್ನು ಗಟ್ಟಿಗೊಳಿಸಲು, ಅದರ ಅರಿವು ಮೂಡಿಸುವುದಾಗಿದೆ ಎಂದರು.

ಮುಂದಿನ ಪೀಳಿಗೆಗೆ ಸಂವಿಧಾನವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾಗಿದೆ. ಪ್ರಜಾಪ್ರಭುತ್ವವನ್ನು ಎಲ್ಲರೂ ಆನಂದಿಸುವಂತಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಮೂಲಕ ಅದರ ಮೌಲ್ಯವನ್ನು ಎತ್ತಿ ಹಿಡಿಯುವ ಕಾರ್ಯ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಗುರುಗಳು, ಗುರುಮಾತೆಯರು, ವಿದ್ಯಾರ್ಥಿಗಳು, ಸಾರ್ವಜನಿಕರು ಇಷ್ಟೊಂದು ವಿಜೃಂಬನೆಯಿಂದ ಪಾಲ್ಗೊಂಡಿದ್ದರು

ಪ್ರಜಾಪ್ರಭುತ್ವ ಗಟ್ಟಿಗೊಳಿಸಿದಲ್ಲಿ  ಅದರ ಆಶೆ ಪೂರೈಸುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ 2500 ಕಿ.ಮೀ ವರೆಗೆ ಮಾನವ ಸರಪಳಿ ಮಾಡಿ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸಲು ಅದರ ತತ್ವ, ವಿಚಾರಗಳನ್ನು ಜನತೆಗೆ ಮುಟ್ಟಿಸುವ ಕಾರ್ಯ ಮಾಡಿದೆ. ಪ್ರಮುಖವಾಗಿದೆ ಎಂದು ಸಂಸದ ಪಿ ಸಿ ಗದ್ದಿಗೌಡರ್ ಅಭಿಪ್ರಾಯ ಪಟ್ಟರು.

ಬಾಗಲಕೋಟೆ ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಮಾತನಾಡಿ ದೇಶಕ್ಕೆ ಅರ್ಥಪೂರ್ಣವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ನೀಡಿದ್ದು, ಅದರಲ್ಲಿ ಅಡಕವಾಗಿರುವ ಆಶಯ, ಅದರ ಹಿಂದೆ ಇರುವ ಸಮಾಜಿಕ ಕಳಕಳಿ, ಚಿಂತನೆ ಸಮಾನತೆ, ಭಾತೃತ್ವ ಸೇರಿದಂತೆ ಹತ್ತು ಹಲವಾರು ಮೌಲ್ಯಗಳನ್ನು ನಾವೆಲ್ಲರೂ ಅನುಸರಿಬೇಕು ಎಂದರು. 

ವಿಧಾನ ಪರಿಷತ್  ಶಾಸಕ.ಎಚ್.ಪೂಜಾರ ಮಾತನಾಡಿ ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ಉದ್ದೇಶ, ಎಲ್ಲರಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಕಾರ್ಯಕ್ರಮದ ಪೂರ್ವದಲ್ಲಿ ನಾಡಗೀತೆ ಹಾಡಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಲಾಯಿತು. ಇದೇ ರೀತಿಯಲ್ಲಿ ಆಲಮಟ್ಟಿಯಿಂದ ಬಾಗಲಕೋಟೆಯ ನವನಗರದ ಜಿಲ್ಲಾಡಳಿತ ಭವನ ಗದ್ದನಕೇರಿ ಕ್ರಾಸ್ ನಿಂದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿಯ ವರಗೆ ಬೃಹತ್ ಮಾನವ ಸರಪಳಿ ನಿರ್ಮಾನವಾಗಿದ್ದು ಕಂಡುಬಂದಿತು 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪಂಡಗದ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳು ಮಹಿಳಾ ಸಂಸ್ಥೆಗಳು ವಿವಿಧ ಪತ್ತಿನ ಸಹಕಾರಿ ಸಂಘದ ಪದಾಧಿಕಾರಿಗಳು ಇಲಕಲ್, ಹುನಗುಂದ, ಕಮತಗಿ, ಗುಳೇದಗುಡ್ಡ, ಹಾಗೂ ಜಿಲ್ಲೆಯ ಎಲ್ಲಾ ಜನನಾಯಕರು, ಗ್ರಾಮ ಪಂಚಾಯತ ಅಧ್ಯಕ್ಷರು ಸದಸ್ಯರು, ಪಟ್ಟಣ ಪಂಚಾಯಿತಿ ಪುರಸಭೆ ನಗರಸಭೆ ಅಧ್ಯಕ್ಷರು ಉಪಾಧ್ಯಕ್ಷರು ವಿವಿಧ ಸರಕಾರಿ ಮತ್ತು ಖಾಸಗಿ ಶಾಲೆಯ ಮುಖ್ಯ ಶಿಕ್ಷಕರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಂತರ ಜಿಲ್ಲಾಡಳಿತದ ಆವರಣದಲ್ಲಿ ಸಸಿಗಳನ್ನು ನೆಡಲಾಯಿ


ವರದಿ ಸಂಗಮಕ್ರಾಸನಿಂದ ಶಂಕರ್ ವನಕಿ ಬಾಗಲಕೋಟೆಯಿಂದ ರಾಜೀವ್ ಸುಂಕದ 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!