ಉಚಿತ ಲ್ಯಾಪ್‍ಟಾಪ್ ವಿತರಣೆ

 *ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ*

  


ನಗರದ ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶುಕ್ರವಾರದಂದು ಆಯೋಜಿಸಿದ್ದ ಪರಿಶಿಷ್ಟ ಜಾತಿ/ಪಂಗಡದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣಾ ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿ ಮಾತನಾಡಿದೆನು,

ಜಿಲ್ಲಾಧಿಕಾರಿಗಳಾದ ಕೆ.ಎಮ್.ಜಾನಕಿ ಅವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದರು. 



ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೂ ಸರ್ಕಾರದ ಯೋಜನೆಯಾದ ಲ್ಯಾಪ್‍ಟಾಪ್ ವಿತರಣೆಯ ಸೌಲಭ್ಯವನ್ನು ಒದಗಿಸುತ್ತಿರುವುದು ಮೆಚ್ಚುವಂತಹ ಸಂಗತಿ. ವಿದ್ಯಾರ್ಥಿಗಳು ಸರ್ಕಾರದ ಈ ಯೋಜನೆಯ ಸೌಲಭ್ಯ ಪಡೆದುಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಅವಿಷ್ಕಾರಗಳಾಗುತ್ತಿವೆ. ಕಾಲಕಾಲಕ್ಕೆ ಸರ್ಕಾರಗಳು ಕೂಡ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಪ್ರಾಶಸ್ತ್ಯ ಕೊಡುತ್ತಿವೆ. ಬಿ.ವಿ.ವಿ ಸಂಘದಿಂದಲೂ ಬೀಳೂರು ಗುರುಬಸವ ಉತ್ಸವ ಸಮಿತಿಯಿಂದಲೂ ಪ್ರತಿವರ್ಷ ಬಡವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.



ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಖಾಸಗಿ ಕಾಲೇಜುಗಳ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳ ಯೋಜನಾ ವೆಚ್ಚದಡಿ ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನ 27 ವಿದ್ಯಾರ್ಥಿಗಳಿಗೆ ಮತ್ತು ಪಿ.ಎಮ್.ಎನ್.ಎಮ್ ದಂತ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಿಸಲಾಯಿತು.



ಕಾರ್ಯಕ್ರಮದಲ್ಲಿ ವೈದ್ಯಕೀಯ ಆಡಳಿತ ಮಂಡಳಿ ಡಾ:-ವೀರಣ್ಣ ಚರಂತಿಮಠ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯೆ ಡಾ.ಭುವನೇಶ್ವರಿ ಯಳಮಲಿ, ಡೆಂಟಲ್ ಕಾಲೇಜ್ ಪ್ರಾಚಾರ್ಯ ಡಾ.ಶ್ರೀನಿವಾಸ ವನಕಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ, ಡಾ.ಮಹಾಂತೇಶ ಭೂತಾಳ ಮತ್ತು ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ರಾಜೀವ್ ಸುಂಕದ ಬಾಗಲಕೋಟೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!