ಶಿವಯೋಗದಿಂದ ಬಾಗಲಕೋಟೆ ಬೆಳಗಿದ ಚೇತನ ಪ್ರಭುದೇವರು.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದ ಪ್ರಯುಕ್ತ ಬಿವಿವಿ.ಸಂಘದಿಂದ ಚರಂತಿಮಠದ ಪ್ರಭುಸ್ವಾಮಿಗಳಿಗೆ ಗೌರವಾಭಿನಂದನೆ ಸಮಾರಂಭ.
ಇಂದು ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಹಾಗೂ ವಿದ್ಯಾಗಿರಿಯ ಬಿ.ವಿ.ವಿ.ಎಸ್ ಕಲಾ, ವಿಜ್ಞಾನ, ಹಾಗೂ ವಾಣಿಜ್ಯ ಸ್ವತಂತ್ರ ಪದವಿ-ಪೂರ್ವ ಮಹಾವಿದ್ಯಾಲಯದಿಂದ ಶುಕ್ರವಾರ ಇಂಜನಿಯರಿಂಗ್ ಕಾಲೇಜಿನ ನೂತನ ಸಭಾಭವನದಲ್ಲಿ ಚರಂತಿಮಠದ ಪೂಜ್ಯರು ಸಂಘದ ಅಧ್ಯಕ್ಷರಾದ ಪ್ರಭುಸ್ವಾಮಿಗಳಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದ ಪ್ರಯುಕ್ತ ಶ್ರೀಗಳಿಗೆ ಗೌರವಾಭಿನಂಧನೆ ಹಾಗೂ 2025-26 ನೇ ಶೈಕ್ಷಣಿಕ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ,ಪೂಜ್ಯರಿಗೆ ಸಂಘದ ಪರವಾಗಿ ಗೌರವಾಭಿನಂದನೆಗಳನ್ನು ಸಲ್ಲಿಸಿ ಮಾತನಾಡಿದೆನು.
ಇಳಕಲ್ಲಿನ ಚಿತ್ತರಗಿ ಸಂಸ್ಥಾನಮಠದ ಪೂಜ್ಯರು ಸಂಘದ ಉಪಾಧ್ಯಕ್ಷರಾದ ಗುರು ಮಹಾಂತಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಇದೇ ಸಂದರ್ಭದಲ್ಲಿ ದ್ವೀತಿಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 6 ಜನ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ. ಎಸ್.ಆರ್.ಮುಗನೂರಮಠ, ಡಾ.ಎಸ್.ಎಂ.ಗಾಂವಕರ ಮತ್ತು ಸಂಘದ ಎಲ್ಲ ಸದಸ್ಯರುಗಳು, ವಿವಿಧ ಮಹಾವಿದ್ಯಾಲಯಗಳ ಪ್ರಾಚಾರ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.