ಕಮತಗಿ ಪಟ್ಟಣ ಪಂಚಾಯತ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

 

ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

 ಕಮತಗಿ - ಇಂದು ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣ ಪಂಚಾಯತ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಸವರಾಜ ಕುಂಬಳಾವತಿ ಅವರ ಪದಗ್ರಹಣ ಸಮಾರಂಭ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎಫ್, ಎನ್ ಹುಲಿಕೇರಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಇಂದಿರಾ ಕ್ಯಾಂಟೀನ್ ಉದ್ಗಾಟಣೆ



 ದಿನಾಂಕ 09/ 08/ 2025ರ ಶನಿವಾರ ಬೆಳಗ್ಗೆ 10:30ಕ್ಕೆ ಕಮತಗಿ ಪಟ್ಟಣ ಪಂಚಾಯತ ಹಳೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭ ನಡೆಯಲಿದೆ.

ಕಮತಗಿಯ ಶ್ರೀ ಹುಚ್ಚೇಶ್ವರ ಮಠದ ಹುಚ್ಚೇಶ್ವರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ. ಬಾಗಲಕೋಟೆಯ ಶಾಸಕರಾದ ಎಚ್ ವೈ ಮೇಟಿ ಉದ್ಘಾಟಿಸಲಿದ್ದಾರೆ. ಪಟ್ಟಣ ಪಂಚಾಯತ ಅಧ್ಯಕ್ಷರಾದ ಶ್ರೀ ಬಸವರಾಜ ಕುಂಬಳಾವತಿ ಘನಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೇತ್ರಾವತಿ ನಿಂಬಲಗುಂದಿ ಪಟ್ಟಣ ಪಂಚಾಯತ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎಫ್ ಎನ್. ಹುಲ್ಲಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

✍️ ಶಂಕರ್ ವನಕಿ ಕಮತಗಿ 

ಕಾಮೆಂಟ್‌‌ ಪೋಸ್ಟ್‌ ಮಾಡಿ

Please Select Embedded Mode To Show The Comment System.*

ನವೀನ ಹಳೆಯದು